ಮಡಿಕೇರಿ : ಕೇರಳದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಪತ್ತೆಯಾಗಿರುವುದರಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕರೋನಾ ಭೀತಿ ಕೇರಳದಲ್ಲೂ ತಲ್ಲಣ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿರುವ ಕರ್ನಾಟಕ ಸರ್ಕಾರ ಕೊಡಗಿನಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೊಡಗು ಜಿಲ್ಲೆಯಲ್ಲೂ ಈಗಾಗಲೇ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಕೇರಳ ಕಾರ್ಮಿಕರ ಪ್ರಯಾಣಕ್ಕೆ 15 ದಿನಗಳವರೆಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ತೋಟಗಳ ಮಾಲೀಕರಿಗೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಪ್ರವಾಸಿ ತಾಣಗಳಲ್ಲಿ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಭಿತ್ತಿ ಪತ್ರಗಳನ್ನು ವಿತರಿಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಗುತ್ತಿದೆ.