ಪ್ರಯಾಗರಾಜ್: ಮಹಾಕುಂಭ ಮೇಳಕ್ಕೆ ತೆರಳಿದ್ದ ಆಸ್ತಿಕರ ಗುಂಪು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ಸಮೀಪ ಸಂಭವಿಸಿದೆ.
ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಹೆದ್ದಾರಿಯಲ್ಲಿ ಬಸ್ ಮತ್ತು ಲೆರೊ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಬೊಲೆರೊ ಕಾರಿನಲ್ಲಿ ಮಹಾಕುಂಭ ಮೇಳಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಛತ್ತೀಸ್‌ಗಢ ರಾಜ್ಯದ ಕೊರ್ಬಾ ಜಿಲ್ಲೆಯವರೆಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 19 ಮಂದಿಗೆ ಗಾಯಗಳಾಗಿದ್ದು ಆಸ್ರತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.