ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಹತ್ಯೆ ಪ್ರಕರಣಕ್ಕೆ ಸಚಿವರ ತಲೆದಂಡವಾಗಿದೆ. ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಸಹಾಯಕನ ಬಂಧನ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜಿನಾಮೆ ನೀಡಿದ್ದಾರೆ.
ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಗಿ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ದೇವೇಂದ್ರ ಫಡ್ನವೀಸ್ ಅವರು ಧನಂಜಯ ಮುಂಡೆ ರಾಜಿನಾಮೆಗೆ ಸೂಚಿಸಿದ್ದರು ಎನ್ನಲಾಗಿದೆ.
ಎನ್ಸಿಪಿಯ ಅಜಿತ್ ಪವಾರ್ ಬಣದ ನಾಯಕರಾಗಿರುವ ಧನಂಜಯ ಅವರು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.