ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

ಬೆಂಗಳೂರು: ದೈನಂದಿನವಾಗಿ ಲಕ್ಷಾಂತರ ಪ್ರಯಾಣಿಕರಿಗೆ ಸಾಗಣೆಯ ಕೇಂದ್ರಬಿಂದುವಾಗಿರುವ ಬೆಂಗಳೂರು ಮೆಜೆಸ್ಟಿಕ್ (ಕೆಂಪೇಗೌಡ) ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಸಾರಿಗೆ ಇಲಾಖೆ ಪ್ರಸ್ತುತ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ ಹಾಗೂ ರೈಲ್ವೆ ಸಂಪರ್ಕ ಹೊಂದಿರುವ ಈ ನಿಲ್ದಾಣವನ್ನು ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ಅಭಿವೃದ್ಧಿಪಡಿಸುವ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯನ್ನು ಸಾರ್ವಜನಿಕ – ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ರೂಪಿಸಲಾಗುತ್ತಿದೆ.

ನಗರ ಹಾಗೂ ಅಂತರನಗರ ಸಾರಿಗೆ ವ್ಯವಸ್ಥೆ, ಮೆಟ್ರೋ ಹಾಗೂ ರೈಲ್ವೆ ಸೇವೆಗಳಲ್ಲಿ ಸಮನ್ವಯ ಸಾಧಿಸಿ ಪ್ರಯಾಣಿಕರಿಗೆ ಸುಗಮ ಹಾಗೂ ಸಮರ್ಪಕ ಸಂಪರ್ಕ ಒದಗಿಸುವುದು ಯೋಜನೆಯ ಪ್ರಧಾನ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತಂತೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದು ರಾಜ್ಯ ಸರ್ಕಾರದ ಅಭಿವೃದ್ಧಿ ಗ್ಯಾರೆಂಟಿ ಎಂದಿದೆ.

Related posts