ಮಿಥುನ್ ರೈ ಬೆಂಬಲಿಗರ ಜಟಾಪಟಿ ಪ್ರಕರಣ; ಹಲವರ ಬಂಧನ

ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ದಿನದಂದು ಮೂಡುಶೆಡ್ಡೆಯಲ್ಲಿ ನಡೆದ ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಕಾ‌ಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮೇಲೆ ದಾಳಿ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬುಧವಾರ ಮತದಾನ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಈ ಸಂದರ್ಭದಲ್ಲಿ ಕಲ್ಲುತೂರಾಟ ನಡೆದಿದೆ. ಮಿಥುನ್ ರೈ ಅವರ ಕಾರನ್ನೂ ಗುರಿಯಾಗಿಸಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದ್ದಾರೆ. ಆ ಘಟನೆಯಲ್ಲಿ ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದರು.

ಮೂಡುಶೆಡ್ಡೆ ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts