ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆಭರಣ ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಮಂಗಳವಾರ ಬೆಳ್ಳಂಬೆಳಿಗ್ಗೆ ಹಲವು ಆಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ಶಿವಭಾಗ್ ನ ಆಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಉಡುಪಿ, ಕುಂದಾಪುರ, ಬ್ರಹ್ಮಾವರ, ಪಡುಬಿದ್ರಿ, ಕಾರ್ಕಳ, ಪುತ್ತೂರು ಸೇರಿದಂತೆ ಹಲವೆಡೆ ಆಭರಣ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.