ಮಂಗಳೂರು: ಪತ್ರಿಕೋದ್ಯಮದ ಹಾಗೂ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬುಧವಾರ ಮನವಿ ಸಲ್ಲಿಸಿತು. ಈ ವೇಳೆ ಪತ್ರಕರ್ತರ ಸಂಘ ಹಮ್ಮಿ ಕೊಂಡಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು .
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ,
ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾದ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್ , ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಮಹಮ್ಮದ್ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ, ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.