ಮಂಗಳೂರು ಶಾರದೋತ್ಸವ ಶತಮಾನೋತ್ಸವ.. ಕಣ್ಮನ ಸೆಳೆದ ವಿಗ್ರಹ

ಮಂಗಳೂರು : ಬಂದರು ನಗರಿಯಲ್ಲಿ ನವರಾತ್ರಿ ಉತ್ಸವದ ರಂಗು ಆವರಿಸಿದೆ. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ, ಆಚಾರ್ಯ ಮಠ ವಠಾರದಲ್ಲಿ ಪೂಜಿಸಲ್ಪಡುವ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ 101ನೇ ವರ್ಷದ ಮಂಗಳೂರು ಶಾರದಾ ಮಹೋತ್ಸವ ಪ್ರಯುಕ್ತ ಗಮನಸೆಳೆದಿದೆ.

ಚಿತ್ರ : ಮಂಜು ನೀರೇಶ್ವಾಲ್ಯ

ಶ್ರೀ ಗೋಕರ್ಣ ಪರ್ತಗಾಳಿ ಮಠದ ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಭೇಟಿನೀಡಿದ್ದು ಶಾರದಾ ಮಾತೆಗೆ ಪೂಜೆ ಸಲ್ಲಿಸಿ ನೆರೆದ ಭಜಕರಿಗೆ ಆಶೀರ್ವದಿಸಿದರು.

ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಬಳಿಕ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ಗೊಂಡ ಸ್ಥಳಕ್ಕೆ ಶ್ರೀಗಳವರು ಆಗಮಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಡಾ . ಉಮಾನಂದ ಮಲ್ಯ, ದೇವಳದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು.

Related posts