ಹಮಾಸ್ ಉಗ್ರರನ್ನು ಬೆಂಬಲಿಸಿದ್ದ ಮಂಗಳೂರು ವ್ಯಕ್ತಿ ಅಂದರ್

ಮಂಗಳೂರು: ಇಸ್ರೇಲ್ ನಲ್ಲಿ‌ ನರಮೇಧ ನಡೆಸಿದ ಹಮಾಸ್ ಉಗ್ರರ ಪರವಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲದಲ್ಲಿ ಹರಿಯಬಿಟ್ಟಿರುವ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಿವಾಸಿ ಜಾಕಿರ್ ಎಂಬಾತ ಈ ಕೃತ್ಯ ನಡೆಸಿದ್ದು ಈ ವೀಡಿಯೋ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆಯೇ ಮಂಗಳೂರು ಉತ್ತರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಹಮಾಸ್ ಬಂಡುಕೋರರ ವಿಜಯಕ್ಕಾಗಿ ಪ್ರಾರ್ಥನೆಗೆ ಈತ ಕರೆ ನೀಡಿದ ವಿಡಿಯೋ ವೈರಲ್ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ, ಹಮಾಸ್ ಉಗ್ರರನ್ನು ಬೆಂಬಲಿಸಿ ಜಾಕಿರ್ ಸಾಮಾಜಿಕ ಜಾಲತಾಣದಲ್ಲಿ ಈತ ವಿಡಿಯೋ ‌ಹರಿಬಿಟ್ಟಿದ್ದ.

Related posts