ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು.
ಪ್ರವರ್ಗ ‘ಎ’ ಮತ್ತು ‘ಬಿ’ ಅಧಿಸೂಚಿತ ದೇವಾಲಯಗಳಲ್ಲಿ ‘ಮಾಂಗಲ್ಯ ಭಾಗ್ಯ’ ಯೋಜನೆ ಅಡಿ ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಲಾಯಿತು. ಈ ಕಾರ್ಯಕ್ರಮ ಮುಜರಾಯಿ ಸಚಿವರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದಿದ್ದು, ಶಾಸಕ ಎಂ.ಆರ್. ಮಂಜುನಾಥ್, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಆಧಿಕಾರಿಗಳು ಉಪಸ್ಥಿತರಿದ್ದರು. ದೇಶಿಕೇಂದ್ರ ಮಹಾಸ್ವಾಮಿ, ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಆಶೀರ್ವಚನವನ್ನು ನೀಡಿದರು.
ಈ ಯೋಜನೆಯಡಿಯಲ್ಲಿ ವಧು-ವರರಿಗೆ ರೂ.55,000/-ಗಳ ಪ್ರೋತ್ಸಾಹ ಧನವನ್ನು ಆದಾಯ ಕಡಿಮೆ ಇರುವ ದೇವಾಲಯಗಳ ನಿಧಿಯಿಂದ ಬಳಸಿಕೊಳ್ಳಲಾಗುವುದು. ಆದಾಯ ಕಡಿಮೆ ಇರುವ ದೇವಾಲಯಗಳಲ್ಲಿ ರೂ.55,000/-ಗಳ ಪ್ರೋತ್ಸಾಹ ಧನವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ನೀಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.