ಬೆಳೆಗಾರರ ಬೆನ್ನಿಗೆ ನಿಂತ ಮೋದಿ ಸರ್ಕಾರ; ಅಡಿಕೆ ಆಮದು ಸುಂಕ ಏರಿಕೆ  

ದೆಹಲಿ: ಅಡಿಕೆ ಬೆಳೆಗಾರರ ನೆರವಿಗೆ ದಾವಿಸಿರುವ ಕೇಂದ್ರ ಸರ್ಕಾರ ಅಡಿಕೆ ಆಮದು ಸುಂಕ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ಹೊರದೇಶದಿಂದ ಕಡಿಮೆ ಬೆಲೆಗೆ ಅಡಿಜೆ ಅಮದಾಗುತ್ತಿರುವುದರಿಂದ ರಾಜ್ಯದ ಬೆಳೆಗಾರರು ಕಂಗಾಲಾಗಿದ್ದಾರೆ, ನಮ್ಮ ರಾಜ್ಯದ ಅಡಿಕೆಯನ್ನು ಕಡಿಮೆ ಬೆಲೆಗೆ ಮಾರುವ ಪರಿಸ್ಥಿತಿಯಲ್ಲಿ ಬೆಳೆಗಾರರು ಸಿಲುಕಿದ್ದಾರೆ. ಬೆಳೆಗಾರರ ಸಂಕಷ್ಟ ಅರಿತ  ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೊರದೇಶಗಳಿಂದ ಆಮದಾಗುವ ಅಡಿಕೆ ಬೆಳೆಯ ಆಮದು ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಳೇಯ ಕನಿಷ್ಠ 251 ರೂಪಾಯಿ ಆಮದು ದರವನ್ನು 100 ರೂಪಾಯಿ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರೂ 351 ರೂಪಾಯಿಗಿಂತ ಹೆಚ್ಚಿನ ಬೆಲೆ ಪಾವತಿಸವೇಕಾಗುತ್ತದೆ. .

ವಿದೇಶಿ ಅಡಿಕೆಗಳ ಮೇಲಿನ ಕನಿಷ್ಠ ಆಮದು ದರ 351 ರೂಪಾಯಿಗೆ ಹೆಚ್ಚಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಸ್ವಾಗತಿಸಿದ್ದಾರೆ, ರೈತರ ಹಿತ ಕಾಯುವ ಸಂಬಂಧ ಸೂಕ್ತ ಕ್ರಮಕ್ಕೆ ನಿರ್ದೇಶಿಸುರುವ ಪ್ರಧಾನಿ ಮೋದಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts