ಯೋಧನ ಬಂಧನ ಸರಿಯಲ್ಲ; ಗೌರವದಿಂದ ಬಿಡುಗಡೆ ಮಾಡಲು ಸಚಿವ ಜಾರಕಿಹೊಳಿ ಆಗ್ರಹ

ಬೆಳಗಾವಿ: ಲಾಕ್’ಡೌನ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಯೋಧನನ್ನು ಬಂಧಿಸಿರುವ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ರಮೇಶ್ ಜಾರಕಿಹೊಳಿ, ಚಿಕ್ಕೋಡಿ ನಗರದಲ್ಲಿ ‌ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದಿದ್ದಾರೆ.

ಇದನ್ನೂ ಓದಿ.. 13 ರಾಜ್ಯಗಳಲ್ಲಿ ಲಾಕ್ ಡೌನ್ ವಿಸ್ತರಣೆ? 

ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಖೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಬ್ಬ ನಿರಪರಾಧಿ ಯೋಧನನ್ನು ಅತ್ಯಂತ ಅಮಾನುಷವಾಗಿ ಹಿಂಸಿಸಿ, ಬಂಧಿಸಿರುವುದು ಸಮವಸ್ತ್ರ ಧರಿಸಿದ ಸೈನಿಕರಿಗೆ ಮಾಡಿದ ಅವಮಾನ ಎಂದಿರುವ ಸಚಿವ ರಮೇಶ್ ಜಾರಕಿಹೊಳಿ, ಬಂಧಿತ ಅರೆ ಸೈನಿಕ ಪಡೆಯ ಯೋಧನನ್ನು ಕೂಡಲೇ ಗೌರವದಿಂದ ಬಿಡುಗಡೆ ಮಾಡಬೇಕು ಮತ್ತು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ಮೇಲೆ ತನಿಖೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ.. ‘ದಿ ಬೆಸ್ಟ್ ಸಿಎಂ’: ಯಡಿಯೂರಪ್ಪ ಸಾಧನೆಗೆ ಬ್ರಿಟನ್ ಸರ್ಕಾರದಿಂದ ಕಿರೀಟ

 

Related posts