ಸಿನಿಮಾ ಚಿತ್ರೀಕರಣಕ್ಕೆ ಅನುಮತಿ

ಬೆಂಗಳೂರು: ಕೊರೋನಾ ಹಾವಳಿಯಿಂದಾಗಿ ಚಿತ್ರೋದ್ಯಮ ಕೂಡಾ ನಲುಗಿದೆ. ಅನೇಕ ಸಿನಿಮಾಗಳು ಅರ್ಧದಲ್ಲೇ ನಿಂತಿದ್ದು ಬಂಡವಾಳ ಹಾಕಿರುವ ನಿರ್ಮಾಪಕರು ದಿಕ್ಕು ತೋಚದಂತಾಗಿದ್ದಾರೆ.

ಇದೀಗ ಲಾಕ್’ಡೌನ್ ನಿಯಮಾವಳಿಗಳಲ್ಲಿ ಮಾರ್ಪಾಡು ಮಾಡಲಾಗುತ್ತಿದ್ದು ಸಿನಿಮಾ ಚಟುವಟಿಕೆಗಳಿಗೂ ಅವಕಾಶ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಈ ನಡುವೆ, ಅರ್ಧದಲ್ಲಿಯೇ ಸ್ಥಗಿತಗೊಂಡಿರುವ ಚಲನಚಿತ್ರ ಹಾಗೂ ಕಿರುತೆರೆ ಧಾರಾವಾಹಿಗಳ ಚಿತ್ರೀಕರಣ ಮುಂದುವರಿಸಲು ಸರ್ಕಾರ ಷರತ್ತಿನ ಅನುಮತಿ ನೀಡಿದೆ.

ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಸೋಮವಾರ ಆದೇಶ ಹೊರಡಿಸಿದ್ದು, ಚಲನಚಿತ್ರ, ಧಾರಾವಾಹಿ ಚಿತ್ರೀಕರಣ ಅವಕಾಶವನ್ನು ಎದುರು ನೋಡುತ್ತಿರುವ ಸಿನಿಮಾ ಅವಲಂಬಿತರಲ್ಲಿ ಸಂತಸ ಮೂಡಿಸಿದೆ.

ಇದನ್ನೂ ಓದಿ.. ಮದುವೆ ಸಡಗರದಲ್ಲಿ ನಟಿ ಶುಭ ಪೂಂಜಾ; ವರ ಯಾರು ಗೊತ್ತಾ? 

 

Related posts