ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ.

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ- MUDA ಸೈಟ್ ಹಂಚಿಕೆ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆಯೇ?

ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಸುದ್ದಿಯೊಂದು ಹರಿದಾಡುತ್ತಿದೆ. ಮುಡಾ ನಿವೇಶನ ಹಂಚಿಕೆ ಕ್ರಮದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸಿದ್ದಾರೆ ಎನ್ನಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ಅಬ್ರಹಾಂ ಅವರಿಗೆ ರಾಜ್ಯಪಾಲರ ಕಚೇರಿಯಿಂದ ಕರೆ ಹೋಗಿದೆ ಎನ್ನಲಾಗಿದೆ. ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಶನಿವಾರ ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ಬರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

Related posts