ಮಾಜಿ ಭೂಗತ ಡಾನ್ ಮುತ್ತಪ್ಪ ರೈ ಇನ್ನಿಲ್ಲ; ಕ್ಯಾಪ್ಟನ್’ನ್ನು ಕಳೆದುಕೊಂಡ ‘ಜಯಕರ್ನಾಟಕ’

ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಇನ್ನಿಲ್ಲ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ 2.30 ರ ಹೊತ್ತಿಗೆ ಕೊನೆಯುಸಿರೆಳೆದರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮತ್ತು 4R ಗ್ರೂಪ್ಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾಗಿರುವ ಮುತ್ತಪ್ಪ ರೈ ಇತ್ತೀಚಿನ ದಶಕದಲ್ಲಿ ಭೂಗತ ಜಗತ್ತಿನಿಂದ ದೂರ ಉಳಿದಿದ್ದರು. ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಏಪ್ರಿಲ್ 30ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ಮೂಲದ ಮುತ್ತಪ್ಪ ರೈಗೆ ರಿಕ್ಕಿ ಮತ್ತು ರಾಕಿ ಎಂಬಿಬ್ಬರು ಮಕ್ಕಳಿದ್ದಾರೆ. ಜಯ ಕರ್ನಾಟಕ ಸಂಘಟನೆ ಕಟ್ಟಿರುವ ಇವರ ಜೊತೆ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಅಭಿಮಾನಿಗಳಿದ್ದಾರೆ.

ಇವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಬೆಂಗಳೂರು ಹೊರವಲಯದ ಬಿಡದಿಯ ಸ್ವಗೃಹದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಪ್ರಸ್ತುತ ಲಾಕ್’ಡೌನ್ ಜಾರಿಯಲ್ಲಿರುವುದರಿಂದ ಕುಟುಂಬ ಸದಸ್ಯರು ಹಾಗೂ ಆಪ್ತರಷ್ಟೇ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬಹುದಷ್ಟೆ.

Related posts