ಕಾಂಗ್ರೆಸ್ ಹಿರಿಯ ನಾಯಕ ಎಂ.ವಿ ರಾಜಶೇಖರನ್ ನಿಧನಕ್ಕೆ ಡಿಕೆಶಿ ಸಂತಾಪ

ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರು ಸರಳ ಸಜ್ಜನಿಕೆಯ ವ್ಯಕ್ತಿ. ಅಜಾತಶತ್ರು ನಾಯಕ ಎಂದೇ ಗುರುತಾಗಿದ್ದ ಅವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಕಾರ್ಯಕರ್ತರಿಗೂ ಸ್ನೇಹಿತನ್ತಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳುತ್ತಾರೆ.

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಎಂ.ವಿ ರಾಜಶೇಖರನ್ ಅವರ ನಿಧನಕ್ಕೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಎಂ.ವಿ. ರಾಜಶೇಖರನ್ ಅವರು ಕಾಂಗ್ರೆಸ್ ಪಕ್ಷ ಕಟ್ಟಿದ ನಾಯಕರಲ್ಲಿ ಒಬ್ಬರು. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಹಾಗೂ ರಾಜ್ಯ ಸಭೆಯ ಸದಸ್ಯರಾಗಿದ್ದ ಅವರ ಪಕ್ಷನಿಷ್ಠೆ ಆದರ್ಶನೀಯ ಎಂದು ಡಿ.ಕೆ.ಶಿ. ನೆನಪಿಸಿಕೊಂಡಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಎಂ.ವಿ. ರಾಜಶೇಖರನ್ಅವರು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರು. ಬಹಳ ಶಿಸ್ತು ಬದ್ಧರಾಗಿದ್ದ ಅವರು ಪ್ರತಿಯೊಬ್ಬರ ಜತೆಗೂ ಸ್ನೇಹದಿಂದ ಬೆರೆಯುತ್ತಿದ್ದರು. ಅವರೊಬ್ಬ ಅಜಾತಶತ್ರು ನಾಯಕ ಎಂದು ಶಿವಕುಮಾರ್ ಸ್ಭರಿಸಿದ್ದಾರೆ.

ಅವರ ಬದುಕು ನಮಗೆ ಆದರ್ಶ. ಅವರು ಮಾರ್ಗದರ್ಶಕರಾಗಿ ನಮ್ಮನ್ನು ಮುನ್ನಡೆಸಿದ್ದರು. ಇಂದು ಅವರನ್ನು ಕಳೆದುಕೊಂಡಿದ್ದೇವೆ. ಇದು ನಮಗೆ ತುಂಬಲಾರದ ನಷ್ಟ ಎಂದು ಡಿ.ಕೆ.ಶಿ. ದುಃಖ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೆ. ಅವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸುದ್ದಿ ಕೇಳಿ ಮನಸಿಗೆ ಬಹಳ ಬೇಸರವಾಗಿದೆ. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬೆಂಬಲಿಗರಿಗೆ ಆ ಭಗವಂತ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related posts