ಹಾಸನ: ಮೈಸೂರು ದಸಾರಾದಲ್ಲಿ ಈ ಹಿಂದೆ ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ. ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅರ್ಜುನ ಅಸುನೀಗಿದೆ. ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಕಾಡಾನೆಯು ಅರ್ಜುನನ ಹೊಟ್ಟೆ ಭಾಗಕ್ಕೆ ತಿವಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ ಸಾವನ್ನಪ್ಪಿದೆ ಎನ್ನಲಾಗಿದೆ.
ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ವಿಧಿವಶ
