ನಾಗ್ಪುರ: ಮೊಘಲ್ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಸೇರಿ 9 ಮಂದಿ ಗಾಯಗೊಂಡಿದ್ದಾರೆ.
#WATCH | Maharashtra: Efforts underway to douse fire in vehicles that have been torched in Mahal area of Nagpur.
Tensions have broken out here following a dispute between two groups. pic.twitter.com/rRheKdpGh4
— ANI (@ANI) March 17, 2025
ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್ ಸಮಾಧಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಸೋಮವಾರ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಿತ್ತು. ಅದರ ಬೆನ್ನಲ್ಲೆ ಕುರಾನ್ ಪ್ರತಿಯನ್ನು ಸುಡಲಾಗಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಹಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ.
ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದಲ್ಲದೆ, ಆಶ್ರುವಾಯುಪ್ರಯೋಗಿಸಿದ್ದಾರೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದ್ದು, ನಾಗ್ಪುರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
#WATCH | Nagpur (Maharashtra) violence: Police undertake combing operation in Mahal. Tensions broke out in Mahal area of Nagpur following a dispute between two groups.
Those involved are being identified and arrested. Section 144 has been imposed. Police have directed people… pic.twitter.com/PLg0HQRPjf
— ANI (@ANI) March 17, 2025