ಉತ್ತರ ಭಾರತದ ವಲಸೆ ಕಾರ್ಮಿಕರ ನೆರವಿಗೆ ಧಾವಿಸಿದ ನಳಿನ್ ಕುಮಾರ್

ಮಂಗಳೂರು: ಲಾಕ್’ಡೌನ್ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಹೊರ ರಾಜ್ಯಗಳ ಸಾವಿರಾರು ವಲಸೆ ಕಾರ್ಮಿಕರು ಸಿಲುಕಿದ್ದಾರೆ. ತಮ್ಮ ರಾಜ್ಯಗಳಿಗೆ ತೆರಳಲು ರೈಲು ವ್ಯವಸ್ಥೆ ಇಲ್ಲದಡೆ ಈ ಕಾರ್ಮಿಕರು ಪರದಾಡುತ್ತಿದ್ದು, ಶುಕ್ರವಾರ ಮಂಗಳೂರಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದರು. ಇದೀಗ ಈ ಅಸಹಾಯಕ ವಲಸೆ ಕಾರ್ಮಿಕರ ನೆರವಿಗೆ ಬಿಜೆಪಿ ರಾಜ್ಯಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧಾವಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ಕಾರ್ಮಿಕರಿಗೆ ಅವರ ಊರಿಗೆ ತೆರಳಲು ಅನುಕೂಲವಾಗುವಂತೆ ಮಂಗಳೂರು ರೈಲು ನಿಲ್ದಾಣದಿಂದ ರೈಲಿನ ವ್ಯವಸ್ಥೆ ಮಾಡಬೇಕೆಂದು ದಕ್ಷಿಣ ಕನ್ನಡ ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವರಾದ ಪಿಯೂಶ್ ಗೋಯಲ್ ಹಾಗೂ ಸುರೇಶ್ ಅಂಗಡಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ.. 1800 ಅಸಹಾಯಕ ಯಕ್ಷ ಕಲಾವಿದರ ಕೈ ಹಿಡಿದ ಕೊಲ್ಲೂರು ಮೂಕಾಂಬಿಕೆ

ಸುಮಾರು 3500 ಹೊರರಾಜ್ಯದ ಕಾರ್ಮಿಕರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಲಾಕ್ ಡೌನ್ ಆಗಿರುವುದರಿಂದ ಅವರು ತಮ್ಮ ಊರುಗಳಿಗೆ ಮರಳಲು ಬಯಸಿದ್ದಾರೆ. ಬಿಹಾರ, ಉತ್ತರ ಪ್ರದೇಶ, ಗುಜರಾತ್, ಪಶ್ಚಿಮ ಬಂಗಾಲ, ರಾಜಸ್ಥಾನ ಹಾಗೂ ಉತ್ತರ ಭಾರತದ ವಿವಿಧ ರಾಜ್ಯಗಳ ನಿವಾಸಿಗಳಾಗಿರುವ ಈ ಕಾರ್ಮಿಕರು ಕರ್ನಾಟಕ ಸರಕಾರದ ಸೇವಾ ಸಿಂಧು ಅರ್ಜಿಯಲ್ಲಿ ಹೆಸರು ನೊಂದಾಯಿಸಿದ್ದಾರೆ. ಪ್ರಸ್ತುತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ತಮ್ಮ ಊರುಗಳಿಗೆ ಮರಳಲು ಉಚಿತ ರೈಲು ಪ್ರಯಾಣಕ್ಕೆ ಈ ಕಾರ್ಮಿಕರು ಮನವಿ ಮಾಡಿದ್ದಾರೆ.

ಹೊರರಾಜ್ಯದ ಕಾರ್ಮಿಕರ ಅನುಕೂಲಕ್ಕಾಗಿ ಮಂಗಳೂರು ರೈಲು ನಿಲ್ದಾಣದಿಂದ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ರೈಲು ವ್ಯವಸ್ಥೆ ಕಲ್ಪಿಸಬೇಕೆಂದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವರಿಗೆ ಬರೆದಿರುವ ಪಾತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ.. 10 ಮತ್ತು 12ನೇ ತರಗತಿ ಪರೀಕ್ಷೆಗೆ ಮುಹೂರ್ತ ಫಿಕ್ಸ್ 

 

Related posts