ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೋವಿಡ್-೧೯ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರೇ ಟ್ವೀಟ್ ಮಾಡಿ ತಾವು ಕೊರೋನಾ ಸೋಂಕಿನ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.
‘ನಾನು COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದು, ‘ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದು ಹೇಳಿಕೊಂಡಿದ್ದಾರೆ.
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
— Nalinkumar Kateel (@nalinkateel) August 30, 2020
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಅವರು ಬೇಗನೆ ಗುಣಮುಖರಾಗಲಿ ಎಂದು ಆಶಿಸಿ ಬಿಜೆಪಿ ನಾಯಕರನೇಕರು ಟ್ವೀಟ್ ಮಾಡಿದ್ದಾರೆ.
ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದ ಸಂದರ್ಭದಲ್ಲಿ ಈಗ #COVID19 ವರದಿ ಪಾಸಿಟಿವ್ ಆಗಿದೆ.
ಅವರು ಆದಷ್ಟು ಬೇಗ ಈ ಕೋರೋನಾ ಸೋಂಕಿನಿಂದ ಗುಣಮುಖರಾಗಿ,ಮತ್ತೆ ಜನ ಸೇವೆಗೆ ಬನ್ನಿ ಎಂದು ನಾನು ಶುಭ ಹಾರೈಸುತ್ತೇನೆ.
— N Ravi Kumar (@nrkbjp) August 30, 2020