ಬೆಂಗಳೂರು: ನಂದಿನಿ ಹಾಲಿನ ಬೆಲೆ ಏರಿಕೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಲೀಟರ್ ಹಾಲಿನ ದರ 4 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಗಳಿವೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ದರ ಹೆಚ್ಚಿಸಬೇಕೆಂಬ ಹಾಲು ಒಕ್ಕೂಟಗಳ ಮನವಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದ್ದು, ದರ ಏರಿಕೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ಏರಿಕೆ ಮಾಡಿದಂತಾಗಿದೆ.