ಸೋನಿಯಾ-ರಾಹುಲ್ ಕುಟುಂಬಕ್ಕೆ ಶಾಕ್.. EDಯಿಂದ 752 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ದೆಹಲಿ: ಸೋನಿಯಾ-ರಾಹುಲ್ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ.) ಶಾಕ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಕಂಪನಿಗಳ 752 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಸೋನಿಯಾ, ರಾಹುಲ್ ಗಾಂಧಿ ಸಹಿತ ಪ್ರಮುಖರನ್ನು ಕೆಲ ಸಮಯದ ಹಿಂದೆಯೇ ವಿಚಾರಣೆಗೆ ಗುರಿಪಡಿಸಿತ್ತು. ಇದೀಗ ಅವರಿಗೆ ಸಂಬಂಧಿಸಿದ್ದೆನ್ನಲಾದ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಹೌಸ್ ಮತ್ತು ಲಕ್ನೋದ ನೆಹರು ಭವನ ಸಹಿತ ಪ್ರಮುಖ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಈ ಪ್ರಕರಣದ ತನಿಖೆ ಕೈಗೊಂಡಿದ್ದು, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ದೆಹಲಿ, ಮುಂಬೈ , ಲಖನೌ ಸೇರಿದಂತೆ ಹಲವೆಡೆಯ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

Related posts