ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರನ್ನು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು ರಾಜ್ಯ ಸರ್ಕಾರ 665 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, 665 ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಎಲ್ಲೆಲ್ಲಿ ಎಷ್ಟೆಷ್ಟು ಆಂಬ್ಯುಲೆನ್ಸ್?
ಬಿಬಿಎಂಪಿಯ ಪೂರ್ವ ವಲಯದಲ್ಲಿ 127
ಪಶ್ಚಿಮ ವಲಯದಲ್ಲಿ 141,
ದಕ್ಷಿಣದಲ್ಲಿ 110,
ರಾಜರಾಜೇಶ್ವರಿ ನಗರದಲ್ಲಿ 40,
ಬೊಮ್ಮನಹಳ್ಳಿಯಲ್ಲಿ 43,
ಮಹದೇವಪುರದಲ್ಲಿ 52,
ದಾಸರಹಳ್ಳಿಯಲ್ಲಿ 24,
ಯಲಹಂಕದಲ್ಲಿ 33
ಪೊಲೀಸ್ ಇಲಾಖೆಯಿಂದ 11 ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 84 ಆಂಬ್ಯುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.