ಹೊಸದಿಲ್ಲಿ: ಕೇಂದ್ರ ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಶುಭ ಸುದ್ದಿ ಸಿಕ್ಕಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ನಂಡಿಸಿದ 2023-24ರ ಆಯವ್ಯಯದಲ್ಲಿ ತೆರಿಗೆ ಪಾವತಿಸುವ ಮಧ್ಯಮವರ್ಗದವರ ಬಹುಕಾಲದ ಕನಸನ್ನು ನನಸಾಗಿಸಿದ್ದಾರೆ.
Under new I-T regime, no tax to be paid if income is below Rs 7 lakh – truly a budget for salaried, middle class & vulnerable.#Budget2023 also simplifies tax structure by reducing slabs to 5 & increasing exemption limit to Rs 3 lakh.#AmritKaalBudget pic.twitter.com/FR23AlKcNC
— Tejasvi Surya (ಮೋದಿಯ ಪರಿವಾರ) (@Tejasvi_Surya) February 1, 2023
ಹಲವು ವರ್ಷಗಳ ಬಳಿಕ ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆ ಮಾಡಲಾಗುತ್ತಿದೆ ಎಂದಿದ್ದಾರೆ. ತೆರಿಗೆ ವಿನಾಯಿತಿ ಮಿತಿಯನ್ನು 3 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಹೊಸ ತೆರಿಗೆ ವ್ಯವಸ್ಥೆಯನ್ನು ಪರಿಚತಯಿಸಿದ ಅವರು, ಹೊಸ ತೆರಿಗೆ ಪದ್ಧತಿಯಂತೆ 7 ಲಕ್ಷ ರೂಪಾಯಿವರೆಗಿನ ಆದಾಯದ ಮೇಲೆ ತೆರಿಗೆ ರಿಯಾಯಿತಿಯನ್ನು ಘೋಷಿಸಿದ್ದಾರೆ.