ಬೆಂಗಳೂರು: ಬಿಜೆಪಿ ಹೈಕಮಾಂಡ್ ಮನವೊಲಿಸಿ, ಅತೃಪ್ತರ ಮನತಣಿಸಿ ಕೊನೆಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ. ರಾಜಭವನದಲ್ಲಿ ಏಳು ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ 3:50ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ಗಮನಸೆಳೆಯಿತು. ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಉಮೇಶ್ ಕತ್ತಿ, ಮುರುಗೇಶ್ ರುದ್ರಪ್ಪ ನಿರಾಣಿ, ಅರವಿಂದ್ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್.ಶಂಕರ್, ಸಿಪಿ ಯೋಗೇಶ್ವರ್. ಎಸ್. ಅಂಗಾರ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಸಚಿವರನೇಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.