ಮಕ್ಕಳಿಗೆ ಹಣ ನೀಡಿ ರಾಜಕೀಯ ಘೋಷಣೆ ಕೂಗಿಸಿದ ಆರೋಪ: ಮಧ್ಯಪ್ರದೇಶ ಸರ್ಕಾರಕ್ಕೆ NHRC ನೋಟಿಸ್

ಭೋಪಾಲ್: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೇತೃತ್ವದ ಯಾತ್ರೆಯಲ್ಲಿ ಮಕ್ಕಳಿಗೆ ಹಣದ ಆಮಿಷವೊಡ್ಡಿ ರಾಜಕೀಯ ಘೋಷಣೆಗಳನ್ನು ಕೂಗಿಸಲಾಗಿದೆ ಎಂಬ ಆರೋಪದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅಕ್ಟೋಬರ್ 22ರಂದು ಸಲ್ಲಿಕೆಯಾದ ದೂರಿನ ಆಧಾರದಲ್ಲಿ ಆಯೋಗದ ಸದಸ್ಯ ಪ್ರಿಯಾಂಕ್ ಕಾನೂಂಗೊ ನೇತೃತ್ವದ ಪೀಠವು ಪ್ರಕರಣವನ್ನು ಪರಿಗಣಿಸಿದೆ. ಮಕ್ಕಳನ್ನು ಯಾತ್ರೆಯಲ್ಲಿ ಭಾಗವಹಿಸಲು ಹಣದ ಆಮಿಷವೊಡ್ಡಲಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುವಂತೆ ಮಧ್ಯಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದೆ.

ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ, ಕೈಗೊಂಡ ಕ್ರಮಗಳ ವರದಿಯನ್ನು (ATR) ಎರಡು ವಾರಗಳೊಳಗೆ ಸಲ್ಲಿಸುವಂತೆ ಆಯೋಗ ನಿರ್ದೇಶಿಸಿದೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಆರೋಪದ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಸೂಚಿಸಲಾಗಿದೆ.

Related posts