ಬೆಂಗಳೂರು: ಕೊರೋನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಹೇರಲಾಗಿದ್ದ ವಾರ ಕಾಲದ ಲಾಕ್’ಡೌನ್ ಕೊನೆಗೊಂಡಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಂಟೈನ್ ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ.
ಇಂದು ಬೆಳಗ್ಗೆ 5ಗಂಟೆಗೆ ಲಾಕ್ ಡೌನ್ ಅವಧಿ ಮುಕ್ತಾಯವಾಗಿದೆ. ಆದರೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ ಕೆಲ ವಿಯಮಗಳನ್ನು ಬಿಗಿಗೊಳಿಯಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಂತೆಯೇ ಭಾನುವಾರ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಉದ್ಯಾನವನಗಳಲ್ಲಿ ಜಿಮ್, ಸಲಕರಣೆಗಳು ಮತ್ತು ಕುಳಿತುಕೊಳ್ಳಲು ಬೆಂಚ್ ಬಳಕೆಯನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ‘ಆನ್ ಲಾಕ್ – 2.0 ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಜುಲೈ 22ರಿಂದ ಜುಲೈ 31ರವರೆಗೂ ಜಾರಿಯಲ್ಲಿರುವಂತೆ ಪರಿಷ್ಕೃತ ಮಾರ್ಗಸೂಚಿ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ಪ್ರತಿ ಭಾನುವಾರದ ಲಾಕ್ ಡೌನ್ ಮುಂದುವರೆಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಆನ್ ಲಾಕ್ – 2.0 ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಜುಲೈ 22ರಿಂದ ಜುಲೈ 31ರವರೆಗೂ ಜಾರಿಯಲ್ಲಿರುವಂತೆ ಪರಿಷ್ಕೃತ ಮಾರ್ಗಸೂಚಿ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ಪ್ರತಿ ಭಾನುವಾರದ ಲಾಕ್ ಡೌನ್ ಮುಂದುವರೆಯಲಿದೆ.@CMofKarnataka pic.twitter.com/28pOc888e1
— Dr Sudhakar K (Modi ka Parivar) (@DrSudhakar_) July 21, 2020