ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುರುಗೇಶ್ ನಿರಾಣಿಯವರು ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದಾರೆಂಬ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಮುಗೇಶ್ ನಿರಾಣಿ ಅವರಿಂದ ಸಂದೇಶವೊಂದು ಹಾಕಲ್ಲಟ್ಟಿದೆ. ಇದು ಕಣ್ತಪ್ಪಿನಿಂದಾದ ಪ್ರಮಾದ ಎಂದಿರುವ ನಿರಣಿ ಈ ಬಗ್ಗೆ ಬಹಿರಂಗ ಕ್ಷಮೆ ಯಾಚಿಸಿದ್ದಾರೆ. ಆದರೂ ಹಿಂದೂ ಕಾರ್ಯಕರ್ತರು ಮಾತ್ರವಲ್ಲ, ಕಾಂಗ್ರೆಸ್ ನಾಯಕರೂ ಮುರುಗೇಶ್ ನಿರಾಣಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಈ ಬೆಳವಣಿಗೆ ಕುರಿತಂತೆ ಟ್ವೀಟ್ ಮಾಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ‘ಮಾಜಿ ಸಚಿವ ಮುರುಗೇಶ್ ನಿರಾಣಿಯವರು ಹಿಂದೂ ದೇವರ ಬಗ್ಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾದ ವಿಚಾರ ಮಾಧ್ಯಮಗಳ ಮೂಲಕ ಗಮನಕ್ಕೆ ಬಂತು. ಇದು ನಿಜವಾಗಿದ್ದರೆ ಬಹಳ ಕೆಟ್ಟ ನಡೆ ಎಂದು ಹೇಳಬೇಕಾಗುತ್ತದೆ. ದೇವರು ಮತ್ತು ಧರ್ಮ ಅವರವರ ನಂಬಿಕೆ ಅದನ್ನು ಗೌರವಿಸಬೇಕು. ಅವಹೇಳನ ಮಾಡಬಾರದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹಿಂದೂ ದೇವರುಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾದ ವಿಚಾರ ಮಾಧ್ಯಮಗಳ ಮೂಲಕ ಗಮನಕ್ಕೆ ಬಂತು.
ಇದು ನಿಜವಾಗಿದ್ದರೆ, ಬಹಳ ಕೆಟ್ಟ ನಡೆ-ನುಡಿ ಎಂದು ಹೇಳಬೇಕಾಗುತ್ತದೆ.
ದೇವರು ಮತ್ತು ಧರ್ಮ ಅವರವರ ನಂಬಿಕೆ, ಅದನ್ನು ನಾವು ಗೌರವಿಸಬೇಕು ಅವಹೇಳನ ಮಾಡಬಾರದು.
1/2— Siddaramaiah (@siddaramaiah) July 21, 2020