‘ನಿಸರ್ಗ’ ಪ್ರಭಾವ; ರಾಜ್ಯ ಕರಾವಳಿಯಲ್ಲೂ ಮಳೆ

ಮಂಗಳೂರು: ಪಶ್ಚಿಮ ಕರಾವಳಿಯಲ್ಲಿ ನಿಸರ್ಗ ಚಂಡಮಾರುತ ಭೀತಿಯ ಅಲೆಯನ್ನೇ ಸೃಷ್ಟಿಸಿದೆ. ಅರಬ್ಬೀ ಸಮುದ್ರದಲ್ಲಿ ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.

ನಿಸರ್ಗ ಚಂಡಮಾರುತದ ಮುನ್ಸೂಚನೆ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ.

ಕಾರವಾರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಇದೇ ವೇಳೆ ಚಂಡಮಾರುತ ಹಿನ್ನೆಲೆಯಲ್ಲಿ ಕಡಲ ತೀರದ ಪ್ರದೇಶಗಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲೂ ಜಿಲ್ಲಾಡಳಿತ ಇದೇ ರೀತಿ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

Related posts