ನಿವಾರ್ ಚಂಡಮಾರುತದ ಹೊಡೆತ; ರಾಜ್ಯದಲ್ಲೂ 3 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ನಿವಾರ್ ಚಂಡಮಾರುತದ ಹೊಡೆತದ ಪರಿಣಾಮ ದಕ್ಷಿಣ ಭಾರತದ ಹಲವು ರಾಜ್ಯಗಳ ಜನರ ನಿದ್ದೆಗೆಡಿಸಿದೆ. ಕೇರಳಕ್ಕೆ ಬುರೇವಿ ಚಂಡಮಾರುತದ ಆಗಮನವಾಗಲಿದ್ದು ಆ ರಾಜ್ಯಕ್ಕಷ್ಟೇ ಅಲ್ಲ ನೆರೆಯ ರಾಜ್ಯಗಳಾದ ತಮಿಳುನಾಡು ಕರ್ನಾಟಕದಲ್ಲಿ ಕೂಡ ನಾಲ್ಕೈದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಹವಾಮಾನ ಇಲಾಖೆ , ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವೆಡೆ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಡಿಸೇಂಬರ್ 5ವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Related posts