ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ ಬೆನ್ನಲ್ಲೇ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಈ ಗೊಂದಲಗಳು ಪ್ರತಿಪಕ್ಷ ಬಿಜೆಪಿಗೆ ಅಸ್ತ್ರವೆನಿಸಿದೆ. ಇದೇ ಸಂದರ್ಭದಲ್ಲಿ ನೌಕರರಿಗೆ ವೇತನ ಪಾವತಿಯಲ್ಲಿ ವಿಳಂಬವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಸರ್ಕಾರದ ಹೊಸ ಘೋಷಣೆ. ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ’ ಎಂದು ಟೀಕಿಸಿದೆ.
BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ, KSRTC ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ, ಮೂರು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರು ಸಂಬಳವನ್ನೇ ಕಂಡಿಲ್ಲ, ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೂ ಸಂಬಳ ಸಿಕ್ಕಿಲ್ಲ, ಸರ್ಕಾರಿ ಶಾಲಾ ಶಿಕ್ಷಕರಿಗೂ ತಿಂಗಳಾದರೂ ಖಾತೆಗೆ ಸಂಬಳ ಜಮೆ ಆಗಿಲ್ಲ, ಗುತ್ತಿಗೆ ಆಧಾರದ ಸರ್ಕಾರಿ ನೌಕರರಿಗೆ ಸಂಬಳ ತಲುಪಿಲ್ಲ ಎಂದು ಬೊಟ್ಟು ಮಾಡಿರುವ ಬಿಜೆಪಿ, ಇನ್ನೂ ಹಲವು ಇಲಾಖೆಗಳ ಸರ್ಕಾರಿ ನೌಕರರು ಸಂಬಳ ಸಿಗದೆ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದಿದೆ.
ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟ ಸಿದ್ದರಾಮಯ್ಯ ಅವರ ಸರ್ಕಾರ, ಗ್ಯಾರಂಟಿಯ ಹಣ ಕೊಡುವುದು ಹಾಗಿರಲಿ, ಮೊದಲು ನೌಕರರ ಸಂಬಳವನ್ನು ಜಾರಿಗೊಳಿಸಲಿ ಎಂದು ಬಿಜೆಪಿ ಟೀಕಿಸಿದೆ.
ರಾಜ್ಯದಲ್ಲಿ @INCKarnataka ಸರ್ಕಾರದ ಹೊಸ ಘೋಷಣೆ. ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ..!
💰BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ..!
💰KSRTC ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ..!
💰ಮೂರು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರು ಸಂಬಳವನ್ನೇ…
— BJP Karnataka (@BJP4Karnataka) August 12, 2023