ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವೆ ಭರ್ಜರಿ ರೆಸ್ ಏರ್ಪಟ್ಟಿದೆ. ಆಡಳಿತಾರೂಢ ಬಿಜೆಪಿಯಲ್ಲಷ್ಟೇ ಅಲ್ಲ, ಕಾಂಗ್ರೆಸ್’ನಲ್ಲೂ ಟಿಕೆಟ್’ಗಾಗಿ ಭರ್ಜರಿ ಲಾಬಿ ನಡೆದಿದೆ.
ಜೂನ್ 29ರಂದು ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯನ್ನು ಪರಿಗಣಿಸಬೇಕೆಂದು ಅಲ್ಪಸಂಖ್ಯಾತ ಮುಖಂಡರು ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದೆ. ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ, ಶಾಕೀರ್ ಸನದಿ, ಸಲೀಂ ಅಹಮದ್, ನಾಸೀರ್ ಅಹಮದ್, ಅಬ್ದುಲ್ ಜಬ್ಬಾರ್, ಆಕಾಂಕ್ಷಿಗಳಾಗಿದ್ದು, ಇವರ ಬೆಂಬಲಿಗರು ಲಾಬಿಯಲ್ಲಿ ನಿರತರಾಗಿದ್ದಾರೆ.
ಈ ನಡುವೆ, ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಗುರುವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು. ಏಳು ಸ್ಥಾನಗಳ ಪೈಕಿ ಎರಡು ಸ್ಥಾನಗಳು ಕಾಂಗ್ರೆಸ್ ಪಾಲಾಗಲಿದ್ದು ಈ ಪೈಕಿ ಒಂದನ್ನು ಮುಸ್ಲಿಂ ಅಭ್ಯರ್ಥಿಗೆ ನೀಡಬೇಕೆಂದು ನಿಯೋಗ ಮನವಿ ಸಲ್ಲಿಸಿದೆ.
ಇದನ್ನೂ ಓದಿ.. ಮೇಲ್ಮನೆಗೆ ರಾಜ್ಯ ಬಿಜೆಪಿಯ 12 ಮಂದಿಯ ಪಟ್ಟಿ ಸಿದ್ದ