ತೈಲ ದರ ಪರಿಷ್ಕರಣೆ ಪುನರಾರಂಭ; ಪೆಟ್ರೋಲ್ ಮತ್ತು ಡೀಸೆಲ್ ಮತ್ತೆ ದುಬಾರಿ

ದೆಹಲಿ: ದೇಶಾದ್ಯಂತ ಲಾಕ್ ಡೌನ್ ಜಾರಿ ಬಳಿಕ ಸುಮಾರು 83 ದಿನಗಳ ನಂತರ ತೈಲ ಕಂಪೆನಿಗಳು ಇಂಧನ ದರ ಹೆಚ್ಚಳ ಮಾಡಿವೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.

ನಿತ್ಯವೂ ತೈಲ ದರ ಪರಿಷ್ಕರಣೆ ಮಾಡುತ್ತಿದ್ದ ತೈಲ ಕಂಪೆನಿಗಳು ಈ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಿದ್ದು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ತಲಾ 60 ಪೈಸೆ ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 63 ಪೈಸೆಯಷ್ಟು ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರದಲ್ಲಿ ಕೂಡ 58 ಪೈಸೆಯಷ್ಟು ಏರಿಕೆಯಾಗಿದೆ.

ಇದನ್ನೂ ಓದಿ.. ಜನರ ಸಂಕಷ್ಟ ವಿಚಾರ; ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಗೆ ರೈತರೇ ಅಸ್ತ್ರ 

 

Related posts