ದೆಹಲಿ: ದೇಶದಲ್ಲಿ ತೈಲ ದರ ಏರಿಕೆಯ ಪರ್ವ ಮುಂದುವರಿದಿದೆ. ಇದೀಗ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ.
ಇಂದು ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 5 ಪೈಸೆ ಏರಿಕೆಯಾಗಿದ್ದು, ಡೀಸೆಲ್ ದರದಲ್ಲಿ 13 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಪ್ರತೀ ಲೀಟರ್ ಡೀಸೆಲ್ ದರ ೮೦.೫೩ ರೂಪಾಯಿಗಳಿಗೆ ಏರಿಕೆಯಾಗಿದೆ. ಪೆಟ್ರೋಲ್ ದರ 80.43 ರೂಪಾಯಿಗಳಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪ್ರತೀ ಲೀಟರ್ ಡೀಸೆಲ್ ದರ 76.58 ರೂಪಾಯಿಗಳಿಗೆ ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ಬೆಲೆ 83.045 ರೂಪಾಯಿ ತಲುಪಿದೆ.