ಪೋಪ್ ಫ್ರಾನ್ಸಿಸ್ ಅವರು ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿದ್ದರು: ಮೋದಿ ಸಂತಾಪ

ನವದೆಹಲಿ/ವ್ಯಾಟಿಕನ್ ಸಿಟಿ: ಈಸ್ಟರ್ ಸೋಮವಾರದಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ 88 ನೇ ವಯಸ್ಸಿನಲ್ಲಿ ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೀವ್ರ ನೋವುಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರೋಮನ್ ಕ್ಯಾಥೋಲಿಕ್ ಚರ್ಚ್‌ನ ನಾಯಕನೊಂದಿಗಿನ ತಮ್ಮ ಭೇಟಿಗಳನ್ನು ಸ್ಮರಿಸಿದ ಪ್ರಧಾನಿ ಮೋದಿ, ಪೋಪ್ ಫ್ರಾನ್ಸಿಸ್ ಅವರನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಯಾವಾಗಲೂ ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿ ಸ್ಮರಿಸುತ್ತಾರೆ ಎಂಡಿದ್ದಾರೆ.

“ಪವಿತ್ರ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೀವ್ರ ನೋವುಂಟಾಗಿದೆ. ಈ ದುಃಖ ಮತ್ತು ಸ್ಮರಣೆಯ ಸಮಯದಲ್ಲಿ, ಜಾಗತಿಕ ಕ್ಯಾಥೋಲಿಕ್ ಸಮುದಾಯಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಪೋಪ್ ಫ್ರಾನ್ಸಿಸ್ ಅವರನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಯಾವಾಗಲೂ ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿ ಸ್ಮರಿಸುತ್ತಾರೆ” ಎಂದು ಪ್ರಧಾನಿ ಮೋದಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

“ಚಿಕ್ಕ ವಯಸ್ಸಿನಿಂದಲೂ ಅವರು ಕರ್ತನಾದ ಕ್ರಿಸ್ತನ ಆದರ್ಶಗಳನ್ನು ಅರಿತುಕೊಳ್ಳಲು ತಮ್ಮನ್ನು ತಾವು ತೊಡಗಿಸಿಕೊಂಡರು. ಅವರು ಬಡವರು ಮತ್ತು ದೀನದಲಿತರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದರು. ಬಳಲುತ್ತಿರುವವರಿಗೆ, ಅವರು ಭರವಸೆಯ ಮನೋಭಾವವನ್ನು ತುಂಬಿದರು. ಅವರೊಂದಿಗಿನ ನನ್ನ ಭೇಟಿಗಳನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅವರ ಬದ್ಧತೆಯಿಂದ ಹೆಚ್ಚು ಪ್ರೇರಿತನಾಗಿದ್ದೆ. ಭಾರತದ ಜನರ ಮೇಲಿನ ಅವರ ವಾತ್ಸಲ್ಯ ಯಾವಾಗಲೂ ಪಾಲಿಸಲ್ಪಡುತ್ತದೆ. ಅವರ ಆತ್ಮಕ್ಕೆ ದೇವರ ಅಪ್ಪುಗೆಯಲ್ಲಿ ಶಾಶ್ವತ ಶಾಂತಿ ಸಿಗಲಿ” ಎಂದು ಮೋದಿ ಹೇಳಿದ್ದಾರೆ.

Related posts