ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡೀರಿ ಜೋಕೆ; 7 ವರ್ಷ ಜೈಲು ಖಚಿತ

ದೆಹಲಿ: ದೇಶದಲ್ಲಿ ಕೊರೋನಾ ಆತಂಕದಲ್ಲಿರುವಾಗಲೇ ಹಲವೆಡೆ ಕೊರೋನಾ ವಾರಿಯರ್ಸ್ ಮೇಲೆ ಸರಣಿ ದಾಳಿಗಳು ನಡೆದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಕೊರೋನಾ ಸೋಂಕಿನ ವಿರುದ್ಧ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ನಡೆಸುವವರಿಗೆ ಜೈಲು ಶಿಕ್ಷೆ ವಿಧಿಸುವ ಸರ್ಕಾರದ ಸುಗ್ರೀವಾಜ್ಞೆ ಹೊರಡಿಸಿದೆ. ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

ದೆಹಲಿ, ಉತ್ತರಪ್ರದೇಶ, ಬಿಹಾರ, ಮಾಂಧ್ಯಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಸರಣಿ ದಾಳಿಗಳು ನಡೆದಿವೆ. ಈ ರೀತಿಯ ಕೃತ್ಯಗಳನ್ನು ಮಟ್ಟಹಾಕುವ ಸಂಬಂಧ ಕಠಿಣ ಕ್ರಮಕ್ಕೆ ದೇಶವ್ಯಾಪಿ ಒತ್ತಾಯ ಕೇಳಿಬಂದಿತ್ತು. ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ ಕೇಂದ್ರ ಸರ್ಕಾರ, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ರೀತಿ ಕಾನೂನು ಜಾರಿಗೆ ತರಲು ಮುಂದಾಯಿತಲ್ಲದೆ ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ ಅದನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗಿತ್ತು. ಇದೀಗ ರಾಸ್ಗ್ಟ್ರಪತಿಯವರಿಂದಲೂ ಅಂಕಿತ ಬಿದ್ದಿದ್ದು, ಈ ಹೊಸ ಕಾನೂನು ತಕ್ಷಣದಿಂದಲೇ ಜಾರಿಗೆ ಬಂದಿದೆ.

ಈ ವರೆಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕೇವಲ 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿತ್ತು. ಇದೀಗ ಈ ಹೊಸ ಕಾನೂನು ಜಾರಿಗೆ ಬಂದಿರುವುದರಿಂದ ಇನ್ನು ಮುಂದೆ ಈ ಶಿಕ್ಷೆಯ ಪ್ರಮಾಣವನ್ನು 6 ತಿಂಗಳಿಂದ 7 ವರ್ಷಕ್ಕೆ ವಿಸ್ತಾರವಾಗಲಿದೆ.

Related posts