ನವದೆಹಲಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದೆ.
ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶಿಫಾರಸಿಗೆ ಅಂಕಿತ ಹಾಕಿದ್ದು ಈ ಮೂಲಕ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದೆ.