KSRTCಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’

ನವದೆಹಲಿ: ರಾಜ್ಯ ಸರ್ಕಾರಿ ಸ್ವಮ್ಯದ ಸಾರಿಗೆ ನಿಗಮ KSRTCಗೆ ಮತ್ತೊಂದು ಪುರಸ್ಕಾರ ಸಿಕ್ಕಿದೆ. ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’ ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಗೆ ಲಭಿಸಿಸೆ.

ನಿಗಮದ ನೌಕರರಿಗೆ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಮುಂಜಾಗ್ರತೆ ವಹಿಸುವ ಉಪಕ್ರಮಗಳಿಗಾಗಿ “ಸಾರಿಗೆ ಸಂಜೀವಿನಿ” ಎಂಬ ಯೋಜನೆ ಜಾರಿಗೆ ತರಲಾಗಿದ್ದು, ಸದರಿ ಉಪಕ್ರಮಕ್ಕಾಗಿ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ.

ಸ್ಕಾಚ್ ಸಂಸ್ಥೆಯು ದೆಹಲಿಯ ಸಿಲ್ವರ್ ಓಕ್ ಹಾಲ್, ಇಂಡಿಯಾ ಹ್ಯಾಬಿಟೇಟ್ಸೆಂಟರ್‌ನಲ್ಲಿ ಶನಿವಾರ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಸ್ಕಾಚ್ ಗ್ರೂಪ್ ಅಧ್ಯಕ್ಷ ಸಮೀರ್ ಕೊಚ್ಚರ್,  ಉಪಾಧ್ಯಕ್ಷ ಡಾ.ಗುರುಶರಣ್ ಧನ್ಜಾಲ್ ಅವರುಗಳು KSRTCಗೆ ಪ್ರಶಸ್ತಿ ಪ್ರದಾನ ಮಾಡಿದರು. ಕೆಎಸ್ಸಾರ್ಟಿಸಿ ಮುಖ್ಯ ಕಾನೂನು ಅಧಿಕಾರಿ ವೆಂಕಟೇಶ ಮತ್ತು ನಿಗಮದ ಮುಖ್ಯ ವ್ಯವಸ್ಥಾಪಕ (ಸಿಬ್ಬಂದಿ) ಅಶ್ರಫ್ ಕೆ.ಎಂ. ಅವರು ಪ್ರಶಸ್ತಿ ಸ್ವೀಕರಿಸಿದರು.

ಇದನ್ನೂ ಓದಿ.. ಸಾರಿಗೆ ಸಂಸ್ಥೆ ನೌಕರರಿಗೆ ‘ಸಾರಿಗೆ ಸಂಜೀವಿನಿ’ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ

Related posts