ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು

ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು.

ಸಿಆರ್‌ಪಿಸಿ ಕಲಂ 321 ರಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಕೇಸ್ ವಾಪಸ್ ಪಡೆಯಲು ಅವಕಾಶವಿದೆ ಎಂದ ರಮೇಶ್‌ ಬಾಬು, ಕೋಮುದ್ವೇಷ ಹರಡುವಿಕೆ, ದ್ವೇಷ ಭಾಷಣ ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರುವಂತಹ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಬಿಜೆಪಿ. ಸೆಪ್ಟೆಂಬರ್ 2022 ರಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿ ಅವರು, ಕೇಸ್ ವಾಪಸ್ ಪಡೆಯುವುದು ಎಲ್ಲಾ ಸರ್ಕಾರಗಳು ಮಾಡುವ ಕೆಲಸ ಎಂದಿದ್ದರು. ರಾಜಕೀಯ ಕಾರಣಕ್ಕೆ ಹುಬ್ಬಳ್ಳಿ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಟೀಕಿಸಿದರು.

ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಅತಿರೇಕಕ್ಕೆ ಹೋಗಿದೆ. ಗುಂಪುಗಾರಿಕೆ ಅತಿಯಾದ ಮಟ್ಟಕ್ಕೆ ಹೋಗಿದೆ. ಅಲ್ಲಿನ ಒಂದು ಬಣ ಡಿಸೆಂಬರ್ ತನಕ ಮಾತ್ರ ವಿಜಯೇಂದ್ರ ಪಕ್ಷದ ಅಧ್ಯಕ್ಷ ಎಂದು ಹೇಳುತ್ತಿದೆ. ಅವಳಿ ಜವಳಿ ವಿರೋಧ ಪಕ್ಷದ ನಾಯಕರಾದ ಅಶೋಕ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಪಕ್ಷ ಮುನ್ನಡೆಸಲು ಆಗುತ್ತಿಲ್ಲ. ವಿರೋಧ ಪಕ್ಷದ ಕೆಲಸ ಮಾಡುವುದು ಬಿಟ್ಟು ಸುಳ್ಳು ಹಬ್ಬಿಸುತ್ತಿದ್ದಾರೆ ಎಂದವರು ಆರೋಪಿಸಿದರು.

ಈ ಸುಳ್ಳಿನ ಸರಮಾಲೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯೂ ಸಹ ಸೇರಿಕೊಂಡು ಹತಾಶೆಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ರಮೇಶ್ ಬಾಬು ಹೇಳಿದರು.

Related posts