ಕಲ್ಮಲಾ ಜಂಕ್ಷನ್‌ – ಲಿಂಗಸಗೂರು ರಸ್ತೆ ಕಾಮಗಾರಿಯಲ್ಲಿ ಸುರಕ್ಷತೆಗೆ ಒತ್ತು ನೀಡಿ; ಸಚಿವರ ಸೂಚನೆ  

ಬೆಂಗಳೂರು : ರಾಯಚೂರ ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ-ಲಿಂಗಸುಗೂರು ರಸ್ತೆ ವೃತ್ತದವರೆಗಿನ 78 ಕಿಲೋಮೀಟರ್‌ ರಸ್ತೆಯ ಅಭಿವೃದ್ದಿ ಕಾಮಗಾರಿಯಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು, ಗುಣಮಟ್ಟದ ಹಾಗೂ ಕ್ಷಿಪ್ರಗತಿಯಲ್ಲಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ಸೂಚನೆ ನೀಡಿದರು.

ಇಂದು ವಿಕಾಸಸೌಧಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್‌ ಪಾಟೀಲ್, ಎನ್‌ ಎಸ್‌ ಭೋಸರಾಜು ಶಾಸಕರಾದ ಬಿ.ಆರ್ ಪಾಟೀಲ್‌, ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಬಸವನಗೌಡ ದದ್ದಲ್‌, ಸರಕಾರಾದ ಪ್ರಧಾನ ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ ಸೆಲ್ವಕುಮಾರ್‌ ಸೇರಿದಂತೆ, ಕೆಆರ್‌ಡಿಸಿಎಲ್‌ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಯಚೂರ ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ-ಲಿಂಗಸುಗೂರು ರಸ್ತೆ ವೃತ್ತದವರೆಗಿನ 78 ಕಿಲೋಮೀಟರ್‌ ಉದ್ದ ರಸ್ತೆಯ ಅಭಿವೃದ್ದಿ ಕಾಮಗಾರಿಯಲ್ಲಿ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು. ಹಗಲು ರಾತ್ರಿ ಕಾಮಗಾರಿ ನಡೆಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಪಾಯಕಾರಿ ತಿರುವುಗಳನ್ನು ಸುರಕ್ಷಿತವಾಗಿಸುವ ನಿಟ್ಟಿನಲ್ಲಿ ಯೋಜನೆಯಲ್ಲಿ ಬದಲಾವಣೆಯ ಅಗತ್ಯವಿದ್ದಲ್ಲಿ ಅದನ್ನು ಪರಿಗಣಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಕಾಮಗಾರಿ ಪ್ರಾರಂಭವಾಗಿರುವುದು ತಡವಾಗಿರುವುದರಿಂದ ಜಿಲ್ಲೆಯ ಜನರಿಗೆ ಬಹಳ ಅನಾನುಕೂಲವಾಗುತ್ತಿದೆ. ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನು ಚುರುಕುಗೊಳಿಸಿ ಕ್ಷಿಪ್ರ ಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶಿಸಿದರು.

Related posts