ಬೆಂಗಳೂರು: ರಾಜ್ಯಾದ್ಯಂತ ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಿತು. ಗೊಂದಲ, ಆತಂಕದ ನಡುವೆ ನಡೆದ ಈ ಪರೀಕ್ಷೆ ವೇಳೆ ಸರ್ಕಾರ ಮತ್ತು ಅಧಿಕಾರಿಗಳು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಹಿಡಿಶಾಪಕ್ಕೂ ಗುರಿಯಾಗಬೇಕಾಯಿತು.
ಕೊರಾನು ವೈರಾಣು ಸೋಂಕು ತಡೆಯಲು ಲಾಕ್’ಡೌನ್ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಮುಂದುಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಭಾಷಾ ಪರೀಕ್ಷೆ ರಾಜ್ಯದಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಇಂಗ್ಲೀಷ್ ಭಾಷಾ ಪರೀಕ್ಷೆಗೆ ಒಚ್ಚು 95,997 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ಪರೀಕ್ಷೆಗೆ ಬರುವ ಎಲ್ಲಾ ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಬೇಕೆಂಬ ಕಡ್ಡಾಯ ನಿಯಮವನ್ನು ಸೂಚಿಸಲಾಗಿತ್ತು. ಆದರೆ ಹಲವೆಡೆ ವಿದ್ಯಾರ್ಥಿಗಳು ಮಾಸ್ಕ್ ಧರಿಸದೇ ಆಗಮಿಸಿದ್ದರು. ಅಂತಹಾ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುತ್ತಿದ್ದ ದೃಶ್ಯ ಕಂಡುಬರುತ್ತಿತ್ತು. ಆದರೆ ಹಲವೆಡೆ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಆತಂಕದ ಸನ್ನಿವೇಶಕ್ಕೂ ಕಾರಣರಾದರು. ಈ ಸಂಬಂಧ , ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳ ಹಾಗೂ ಶಿಕ್ಷಕರು ಆಕ್ರೋಶಕ್ಕೆ ಗುರಿಯಾದರು.