ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಯುವಕನ ಬಂಧನ

ವಿಜಯಪುರ: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ರಾಜ್ಯ ಸರ್ಕಾರಕ್ಕೆ ಸವಾಲೆಂಬಂತಾಗಿದೆ. ದ್ವಿತೀಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿದೆ ಎಂಬ ಸುದ್ದಿ ಹರಿದಾಡಿ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿತ್ತು. ಈ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಕಾರ್ಯಾಚರಣೆಗಿಳಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇಂಡಿ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಬೆಳಿಗ್ಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಪರೀಕ್ಷಾ ಕೇಂದ್ರದಲ್ಲಿದ್ದ ವಿದ್ಯಾರ್ಥಿಯೊಬ್ಬ ಪ್ರಶ್ನೆಪತ್ರಿಕೆಯನ್ನು ಕಿಟಕಿಯಿಂದ ಹೊರಗೆ ತೋರಿಸಿ ಫೋಟೋ ತೆಗೆಯಲು ಅವಕಾಶ ಮಾಡಿಕೊಟ್ಟಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮುರುಗೇಶ್ ಎಂಬಾತನನ್ನು ಬಂಧಿಸಿದ್ದಾರೆ. ಈ ನಡುವೆ ನಿರ್ಲಕ್ಷ್ಯ ತಾಳಿದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ನಾರಾಯಣಕರ್ ಅವರನ್ನು ಜಿಲ್ಲಾಧಿಕಾರಿಗಳು ಶಿಸ್ತು ಕ್ರಮಕ್ಕೆ ಸೂಚಿಸಿದ್ದಾರೆ.

Related posts