ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಈ ತಿಂಗಳ ೨೦ ರಂದು ಪ್ರಕಟವಾಗುವ ನಿರೀಕ್ಷೆಯಿದೆ.
ಈ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದು, ಜುಲೈ 20 ರ ಸುಮಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕಳೆದ ಮಾರ್ಚ್‍ನಲ್ಲಿ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂಗ್ಲೀಷ್ ವಿಷಯದ ಪರೀಕ್ಷೆಯನ್ನು ಲಾಕ್‍ಡೌನ್ ಸಡಿಲಿಕೆಯಾದ ನಂತರ ಜೂನ್ 18 ರಂದು ನಡೆಸಲಾಗಿತ್ತು. ಈ ಪರೀಕ್ಷೆ ನಂತರ ಹಲವಾರು ವಿದ್ಯಾರ್ಥಿಗಳು ಸಚಿವರಿಗೆ ಕರೆ ಮಾಡಿ ಫಲಿತಾಂಶ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರಂತೆ. ಈ ಹಿನ್ನೆಲೆಯಲ್ಲಿ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ ಎಂದವರು ಟ್ವೀಟ್ ಮಾಡಿದ್ದಾರೆ.
ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ.
ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ.
— S.Suresh Kumar (Modi ka Parivar) (@nimmasuresh) July 9, 2020
ಇದನ್ನೂ ಓದಿ.. ಕೊರೋನಾ ಸೋಂಕಿತರಿಗೆ ಬಯೋಕಾನ್ ಔಷಧ?