ನವದೆಹಲಿ: 40 ಮಂದಿ ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರರ ದಾಳಿಗೆ ಒಂದು ವರ್ಷ. ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ್ದ ಈ ದಾಳಿಯಲ್ಲಿ ೪೦ ಯೋಧರು ಹುತಾತ್ಮರಾಗಿದ್ದರು. ಕಳೆದ ವರ್ಷ ಫೆ.14 ರಂದು ಪುಲ್ವಾಮಾ ಜಿಲ್ಲೆಯ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್’ಪಿಎಫ್ ಸಿಬ್ಬಂದಿ ತೆಳಲುತ್ತಿದ್ದ ವಾಹನದ ಮೇಲೆ ದಾಳಿ ನಡೆದಿತ್ತು.
ಈ ಹುತಾತ್ಮ ಸೇನಾನಿಗಳಿಗೆ ದೇಶವ್ಯಾಪಿ ಶ್ರದ್ದಾಂಜಲಿ ಸಲ್ಲಿಸಲಾಗುತ್ತಿದೆ. ಶ್ರೀ ಪುಲ್ವಾಮಾದ ಲೆತ್ ಪೋರಾದಲ್ಲಿರುವ ಸಿಆರ್’ಪಿಎಪ್ ತರಬೇತಿ ಕೇಂದ್ರದಲ್ಲಿನ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ ಹುತಾತ್ಮ ಯೋಧರನ್ನು ಸ್ಮರಿಸಿದರು.
ಇದೆ ವೇಳೆ ಹುತಾತ್ಮರಾದ 40 ಯೋಧರ ಸ್ಮರಣಾರ್ಥ ಲಾತ್ ಪೋರ ಸೇನಾ ಶಿಬಿರದಲ್ಲಿ ನಿರ್ಮಿಸಿರುವ ಸ್ಮಾರಕ ಇಂದು ಲೋಕಾರ್ಪಣೆಗೊಳ್ಳಲಿದೆ.