ಧಾರವಾಡ : ಲೋಕೋಪಯೋಗಿ ಇಲಾಖೆಯಲ್ಲಿ ಕಿರಿಯ ಇಂಜಿನೀಯರ್ಗಳು ಹಾಗೂ ಸಹಾಯಕ ಇಂಜಿನೀಯರ್ಗಳ ಬಡ್ತಿ, ನಿವೃತ್ತಿ ಮತ್ತಿತರ ಕಾರಣಗಳಿಂದ ಸುಮಾರು 990 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಡಿಪ್ಲೋಮಾ ಮತ್ತು ಬಿಇ ಪದವಿ ಪಡೆದಿರುವ ಅರ್ಹ ಯುವಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಹೇಳಿದ್ದಾರೆ.
ನಗರದ ಸರ್ಕಿಟ್ ಹೌಸ್ನಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನೀಯರ್ಗಳ ಕೊರತೆಯನ್ನು ತುರ್ತಾಗಿ ಸರಿದೂಗಿಸಲು ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಡಿಪ್ಲೋಮಾ ಮತ್ತು ಪದವೀಧರ ಇಂಜಿನೀಯರ್ಗಳನ್ನು ನೇಮಿಸಿಕೊಳ್ಳಲು ಇಂದು ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.
ಸರ್ಕಾರದ ಅಧಿಕೃತ ಮಾನವ ಸಂಪನ್ಮೂಲ ಏಜೆನ್ಸಿಗಳಿಗೆ ಆಧ್ಯತೆ ನೀಡಲಾಗುವುದು. ಈ ಕ್ರಮದಿಂದ ಸ್ಥಳೀಯ ಯುವಕರು ಹಾಗೂ ಅರ್ಹ ಪದವಿಧರ ಇಂಜಿನೀಯರ್ಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಸಹಾಯವಾಗಲಿದೆ ಎಂದರು.