ಕೋವಿಡ್ ಸಂಕಷ್ಟದಲ್ಲಿರುವವರಿಗೆ ನೆರವಾಗಿ; ಕೈ ಕಾರ್ಯಕರ್ತರಿಗೆ ಡಿಕೆಶಿ ಕರೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಮರಣ ಮೃದಂಗ ಭಾರಿಸುತ್ತಿದ್ದು ಈ ಬೆಳವಣಿಗೆ ಆರೋಗ್ಯ ಇಲಾಖೆಗೆ ಸವಾಲಾಗಿದೆ. ಈ ಸಂಕಷ್ಟ ಕಾಲದಲ್ಲಿ ಅಸಹಾಯಕರಿಗೆ ನೆರವಾಗುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜೂನ್ 19 ರಂದು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ಜನ್ಮದಿನ. ಈ ದಿನವನ್ನ ಬಡವರ ಕಲ್ಯಾಣಕ್ಕಾಗಿ, ಜನತೆಯ ಸೇವೆಗಾಗಿ ಸಮರ್ಪಿಸೋಣ ಎಂದು ಡಿಕೆಶಿ ಕಾಂಗ್ರೆಸ್ ಸೇನಾನಿಗಳಿಗೆ ಕರೆ ಕೊಟ್ಟಿದ್ದಾರೆ.

ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರು ತಮ್ಮ ಜಿಲ್ಲೆ, ಕ್ಷೇತ್ರ, ಬ್ಲಾಕ್ ನಲ್ಲಿ ಕೋವಿಡ್ ನಿಂದಾಗಿ ಸಂಕಷ್ಟದಲ್ಲಿ ಇರುವವರಿಗೆ ನೆರವಾಗಬೇಕು ಎಂದವರು ಸಲಹೆ ಮಾಡಿದ್ದಾರೆ.

ಇದನ್ನೂ ಓದಿ.. ಆಪರೇಷನ್ ಕಮಲಕ್ಕೆ ಬಲಿಯಾದವರು ಸೇಫ್ ಅಲ್ಲ?

Related posts