ಮಧುರೈ: ಕೇಂದ್ರ ಸರ್ಕಾರದ ವಿರುದ್ಧ ವಾಕ್ಪ್ರಹಾರ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ, ಕೃಷಿ ಕಾನೂನು ಮೂಲಕ ರೈತರನ್ನು ಸರ್ವನಾಶ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರ ಕೃಷಿ ಕಾನೂನುಗಳ ಮೂಲಕ ತನ್ನ ಇಬ್ಬರು ಅಥವಾ ಮೂವರು ಸ್ನೇಹಿತರಿಗೆ ಲಾಭ ಮಾಡಿಕೊಡಲು ಯತ್ನಿಸುತ್ತಿದೆ ಎಂದರು.
ರೈತರದ್ದೆಲ್ಲವನ್ನೂ ಅವರ ಮೂವರು ಸ್ನೇಹಿತರಿಗೆ ನೀಡಲು ಯತ್ನಿಸುತ್ತಿದೆ. ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ಜಾರಿಮಾಡುವ ಮೂಲಕ ರೈತರನ್ನು ನಾಶ ಮಾಡಲಿದೆ. ಹಾಗಾಗಿ ತಮ್ಮ ಪಕ್ಷ ರೈತರ ಜೊತೆ ನಿಲ್ಲಲಿದೆ ಎಂದು ಹೇಳಿದರು.