ರಾಯಚೂರು ಶಾಲಾ ಬಸ್‌ ಅಪಘಾತ: ಇಬ್ಬರು ಮಕ್ಕಳ ಸಾವು, 18 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು: ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟು, ಒಟ್ಟು 18 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಡಾ.ಶರಣಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಸಚಿವರು

ರಾಯಚೂರಿನಲ್ಲಿ ಸಂಭವಿಸಿದ ದುರಂತದ ಕುರಿತು ಕೂಡಲೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಚಿವರು ಸೂಕ್ತ ಚಿಕಿತ್ಸೆ ಕೊಡಿಸಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಅಧಿಕಾರಿಗಳನ್ನು ನಿಯೋಜಿಸಲು ಸೂಚನೆ ನೀಡಿದ್ದಾರೆ.

ಈ ಘಟನೆಯಲ್ಲಿ ಕುರ್ಡಿ ಗ್ರಾಮದ ಸಮರ್ಥ (7 ವರ್ಷ) ಹಾಗೂ 7 ನೇ ತರಗತಿಯ ವಿದ್ಯಾರ್ಥಿ ಶ್ರೀಕಾಂತ (12 ವರ್ಷ) ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಯ ಸುದ್ದಿ ತಿಳಿದು ನಿಜಕ್ಕೂ ತೀವ್ರ ಬೇಸರವಾಯಿತು. ಮೃತ ವಿದ್ಯಾರ್ಥಿಗಳಿಗೆ ಸಂತಾಪವನ್ನು ಸೂಚಿಸುತ್ತೇನೆ. ಸ್ಕೂಲ್ ಬಸ್‌ನಲ್ಲಿ ಇದ್ದ ಮೂವರು ಮಕ್ಕಳ ಕಾಲುಗಳೇ ತುಂಡಾಗಿರುವ ಮಾಹಿತಿ ಇದೆ. ಇವರಿಗೆ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Related posts