ಬೆಂಗಳೂರು,: ರಾಜ್ಯದ ಹಲವೆಡೆ ಈ ತಿಂಗಳ 9ರ ವರೆಗೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಸೇರಿದಂತೆ ರಾಜ್ಯದ ವಿವಿದೆಡೆ ಮಳೆಯಾಗುವ ಸಾಧ್ಯೆತೆಯಿದೆ.
ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯಲ್ಲಿ ಹೆಚ್ಚು ತೇವಾಂಶದ ಪ್ರಮಾಣವಿರಲಿದ್ದು ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನ.9ರ ವರೆಗೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ. ಮಂಗಳೂರು,ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.