ಬೆಂಗಳೂರು: ಮಹತ್ವದ ಆದೇಶವೊಂದರಲ್ಲಿ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಪ್ರಸಕ್ತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರು ಈ ತಿಂಗಳಾಂತ್ಯದಲ್ಲಿ ನಿವೃತ್ತಿಯಾಗಲಿದ್ದಾರೆ. ರಾಜ್ಯ ಕಾರ್ಯಾಂಗದ ಅತ್ಯುನ್ನತ ಹುದ್ದೆಯಾಗಿರುವ ಮುಖ್ಯಕಾರ್ಯದರ್ಶಿ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ಸರ್ಕಾರ ನೇಮಕ ಮಾಡಿದೆ. ರಜನೀಶ್ ಗೋಯೆಲ್ ಅವರು 1986ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.